ನಾಡು-ನುಡಿ:ಮರುಚಿಂತನೆ – “ಜಾತಿ ಹಾಗೂ ಅಸ್ಮಿತೆ ರಾಜಕೀಯ” ಭಾಗ ೨
– ಪ್ರೊ. ಜೆ.ಎಸ್. ಸದಾನಂದ, ಕುವೆಂಪು ವಿಶ್ವವಿದ್ಯಾನಿಲಯ
ನಾಡು-ನುಡಿ:ಮರುಚಿಂತನೆ – “ಜಾತಿ ಹಾಗೂ ಅಸ್ಮಿತೆ ರಾಜಕೀಯ” ಭಾಗ ೧
ನವ ಸಾಮಾಜಿಕ ಚಳುವಳಿ ಸಿದ್ಧಾಂತಗಳು:
1960 ಹಾಗೂ 70ರ ದಶಕದಲ್ಲಿ ಪ್ರಾರಂಭವಾದ ನವ ಸಾಮಾಜಿಕ ಚಳುವಳಿ ಸಿದ್ಧಾಂತಗಳು ಮಾರ್ಕ್ಸ್ ವಾದಿ ನಿಲುವುಗಳಿಗಿಂತ ಭಿನ್ನವಾದ ನಿಲುವನ್ನು ಮುಂದಿಡಲು ಯಶಸ್ವಿಯಾದವು. ವರ್ಗಾದಾರಿತವಲ್ಲದ ಅಸ್ಮಿತೆಯ ರಾಜಕೀಯ ಕೇವಲ ಸಾಂಕೇತಿಕ ಎನ್ನುವ ಮಾರ್ಕ್ಸ್ ವಾದಿ ನಿಲುವನ್ನು ಇವು ಅಲ್ಲಗಳೆಯುತ್ತವೆ. ಈ ಸಿದ್ಧಾಂತವು ಅಸ್ಮಿತೆ ರಾಜಕೀಯವನ್ನು ಒಂದು ವಿಶಿಷ್ಟ ಬಗೆಯ ರಾಜಕೀಯ ಎಂದೇ ಪ್ರತಿಪಾದಿಸುತ್ತದೆ. ಅಸ್ಮಿತೆಯಾದಾರಿತ ಚಳುವಳಿಗಳನ್ನು ಆಧುನಿಕತೆಯ ಪರಿಣಾಮವಾಗಿ ಆರ್ಥಿಕ ಮತ್ತು ಸಾಮಾಜಿಕ ವಲಯದ ಉನ್ನತ ಸ್ಥರದಲ್ಲಿ ಆದ ರಾಚನಿಕ ಬದಲಾವಣೆ ಅಸ್ಮಿತೆ ರಾಜಕೀಯವನ್ನು ಹುಟ್ಟು ಹಾಕಿದೆ ಮತ್ತು ಇದೊಂದು ಐತಿಹಾಸಿಕವಾದ ಸಾಮೂಹಿಕ ಪ್ರತಿಕ್ರಿಯೆ ಎಂದು ಈ ಸಿದ್ಧಾಂತದ ಪ್ರತಿಪಾದನೆಯಾಗಿದೆ. ಕೆಲವು ವಿದ್ವಾಂಸರು ಹೇಳುವಂತೆ ಅಸ್ಮಿತೆ ರಾಜಕೀಯವು ಕೈಗಾರಿಕೋತ್ತರ ಸಮಾಜದಲ್ಲಾಗುತ್ತಿರುವ ಒಂದು ಬಗೆಯ ಸ್ಥಿತ್ಯಂತರ (ಟೌರಿನ್ 1981). ಹಬರ್ಮಾಸ್ರವರ ಅಭಿಪ್ರಾಯದಲ್ಲಿ ಅಸ್ಮಿತೆ ಚಳುವಳಿಗಳು ಪ್ರಭುತ್ವದ ನಿಯಂತ್ರಣ ಹಾಗೂ ಅದರ ನಿರ್ಣಯಗಳ ಒತ್ತಡಕ್ಕೆ ಹೆಚ್ಚು ಹೆಚ್ಚಾಗಿ ಒಳಗಾಗುತ್ತಿರುವ ಸಮುದಾಯಗಳು ಅಂತಹ ಹಿಡಿತದಿಂದ ತಪ್ಪಿಸಿಕೊಳ್ಳುವ ಪ್ರಯತ್ನದ ಫಲವಾಗಿವೆ (ಹಬರ್ಮಾಸ್ 1985).
ನಾಡು-ನುಡಿ:ಮರುಚಿಂತನೆ – “ಜಾತಿ ಹಾಗೂ ಅಸ್ಮಿತೆ ರಾಜಕೀಯ” ಭಾಗ ೧
– ಪ್ರೊ. ಜೆ.ಎಸ್. ಸದಾನಂದ, ಕುವೆಂಪು ವಿಶ್ವವಿದ್ಯಾನಿಲಯ
ರಾಜಕೀಯ ಸಿದ್ಧಾಂತದಲ್ಲಿ ಅಸ್ಮಿತೆ ರಾಜಕೀಯದ ಪರಿಕಲ್ಪನೆ ಪ್ರಬಲವಾಗಿದ್ದು 20ನೇ ಶತಮಾನದ ಉತ್ತರಾರ್ಧದಲ್ಲಿ. ತಮ್ಮ ಅಸ್ತಿತ್ವ ಸಂಪೂರ್ಣ ಅವಗಣನೆಗೆ ಒಳಗಾಗಿದೆ ಮತ್ತು ಆ ಕಾರಣದಿಂದ ತಮ್ಮನ್ನು ಪ್ರಾತಿನಿಧ್ಯದಿಂದ ವಂಚಿತರನ್ನಾಗಿಸಿ ರಾಜಕೀಯ ಮುಖ್ಯವಾಹಿನಿಯಿಂದ ದೂರವಿರಸಲಾಗಿದೆ ಎನ್ನುವ ಭಾವನೆ ಬೆಳೆಸಿಕೊಂಡ ಒಂದು (ಸಾಮಾಜಿಕ/ಸಾಂಸ್ಕೃತಿಕ) ಗುಂಪು ರಾಜಕೀಯ ಸಂಚಲನೆಗೆ ತೊಡಗುವ ಪ್ರಕ್ರಿಯೆಯನ್ನು ಅಸ್ಮಿತೆ ರಾಜಕೀಯ ಎಂದು ಕರೆಯಲಾಗುತ್ತದೆ. ಸಾರ್ವತ್ರಿಕ ಒಳಿತು ಅಸ್ಮಿತೆ ರಾಜಕೀಯದ ಗುರಿಯಾಗಿರುವುದಿಲ್ಲ ಮತ್ತು ಅಂತಹ ರಾಜಕೀಯ ಹೋರಾಟ ಯಾವುದೇ ರಾಜಕೀಯ ಪಕ್ಷಕ್ಕೆ ಸೀಮಿತವಾಗಿರುವುದಿಲ್ಲ. ಮುಖ್ಯವಾಹಿನಿಯಿಂದ ಬದಿಗೆ ಸರಿಸಲ್ಪಟ್ಟ ತನ್ನನ್ನು ಮುಖ್ಯವಾಹಿನಿಯೊಂದಿಗೆ ಗುರುತಿಸಿಕೊಳ್ಳುವಂತೆ ಮಾಡುವುದು ಒಂದು ಗುಂಪಿನ ಅಸ್ಮಿತೆ ರಾಜಕೀಯದ ಮುಖ್ಯ ಉದ್ದೇಶವಾಗಿರುತ್ತದೆ.
20ನೇ ಶತಮಾನದ ಉತ್ತರಾರ್ಧದಲ್ಲಿ ಅಮೇರಿಕಾ ದೇಶದಲ್ಲಿ ಪ್ರಾರಂಭವಾದ (ದ್ವಿತೀಯ ಹಂತದ) ಸ್ತ್ರೀವಾದೀ ಚಳುವಳಿ, ಕರಿಯರ ನಾಗರೀಕ ಹಕ್ಕುಗಳ ಹೋರಾಟ, ಸಲಿಂಗಿಗಳು ತಮ್ಮ ಹಕ್ಕಿಗಳಿಗಾಗಿ ಮಾಡಿದ ಹೋರಾಟ ಮೊದಲಾದವುಗಳನ್ನು ಅಸ್ಮಿತೆ ರಾಜಕೀಯ ಎಂದು ಮೊತ್ತ ಮೊದಲ ಬಾರಿಗೆ ಗುರುತಿಸಲಾಯಿತು. ಈ ಎಲ್ಲಾ ಗುಂಪುಗಳು ತಮ್ಮ ವಿಶಿಷ್ಟ ಅಸ್ಮಿತೆಯನ್ನು ಗುರುತಿಸಿ ಗೌರವಿಸದೆ ಆ ಕಾರಣಕ್ಕಾಗಿ ತಾವು ಮುಖ್ಯವಾಹಿನಿಯಿಂದ ಬದಿಗೆ ಸರಿಸಲ್ಪಟ್ಟ ಪ್ರಕ್ರಿಯೆಯ ವಿರುದ್ಧ ಹೋರಾಟ ಪ್ರಾರಂಬಿಸಿದವು. ತಾವು ಸಾಮಾಜಿಕವಾಗಿ ರಾಜಕೀಯವಾಗಿ ತುಳಿತಕ್ಕೊಳಗಾಗಿದ್ದೇವೆ ಎನ್ನುವ ಭಾವನೆಯನ್ನು ಆಧರಿಸಿ ಅಸ್ಮಿತೆ ರಾಜಕೀಯದ ಸಂಘಟನೆಯು ತನ್ನ ಸ್ವರೂಪವನ್ನು ಪಡೆದುಕೊಳ್ಳುತ್ತದೆ. ಅಸ್ಮಿತೆ ರಾಜಕೀಯ ಎಂದು ಕರೆಯಲ್ಪಡುವ ರಾಜಕೀಯ/ಸಾಮಾಜಿಕ ಚಳುವಳಿಗಳ ವ್ಯಾಪ್ತಿ ವಿಶಾಲವಾದುದಾಗಿದೆ. ರಾಜಕೀಯ ಶಾಸ್ತ್ರದ ಅಧಯಯನಗಳಲ್ಲಿ ಅಸ್ಮಿತೆ ರಾಜಕೀಯಕ್ಕೆ ಸಂಬಂದಿಸಿದ ಬರವಣೆಗೆಗಳು ಪಾಶ್ಚಾತ್ಯ ಬಂಡವಾಳಿಶಾಹಿ ಪ್ರಜಾಪ್ರಭುತ್ವಗಳಿಗೆ ಸಂಬಂದಿಸಿರುತ್ತವೆ. ಬಂಡವಾಳಶಾಹಿ ವ್ಯವಸ್ಥೆಯ ಹಿಡಿತ ಪ್ರಬಲವಾಗುತ್ತಾ ಹೋದ ಹಾಗೆ ಪರಂಪರಾನುಗತವಾಗಿ ಬಂದ ಸಮುದಾಯಗಳು ತಮ್ಮ ಅಸ್ಮಿತೆಗಳನ್ನು ಕಳೆದುಕೊಳ್ಳುತ್ತಾ ಹೋಗಿ ಅಂತಹ ಸಮುದಾಯಗಳ ಸದಸ್ಯರಲ್ಲಿ ಪರಕೀಯತೆಯ ಭಾವನೆ ಹೆಚ್ಚಗುತ್ತಾ ಹೋದದ್ದರ ಪರಿಣಾಮದಿಂದಾಗಿ ಅಸ್ಮಿತೆ ರಾಜಕೀಯ ಹುಟ್ಟಿಕೊಂಡಿದೆ ಎಂದು ಕೆಲವರು ಭಾವಿಸುತ್ತಾರೆ.
ಮತ್ತಷ್ಟು ಓದು 
ಕಾಂಗ್ರೆಸ್ಸಿನ ‘ನಮೋ’ನಿಯಾ ಮತ್ತು ಸೆಕ್ಯುಲರ್ ‘ನಾಯಿಮರಿ’
– ರಾಕೇಶ್ ಶೆಟ್ಟಿ
ಭಾರತದಲ್ಲಿ ಭಾವುಕತೆಗೇನಾದರೂ ಬರವುಂಟೇ? ಹಾಗೇನಾದರೂ ಇದ್ದಿದ್ದರೆ ನಮ್ಮ ಸ್ಥಿತಿ ಸ್ವಲ್ಪಮಟ್ಟಿಗಾದರೂ ಸುಧಾರಿಸುತ್ತಿತ್ತೋ ಏನೋ? ಆದರೆ,ಭಾವುಕತೆ ಅನ್ನುವುದು ನಮ್ಮ ಅಸ್ಮಿತೆಯ ಭಾಗವಾಗಿರುವುದರಿಂದಲೇ ನಮ್ಮ ರಾಜಕಾರಣಿಗಳು,ರಾಜಕೀಯ ಪಕ್ಷಗಳು ಪದೇ ಪದೇ ಭಾವುಕತೆಯ ಬಿರುಗಾಳಿಯೆಬ್ಬಿಸಿ ತಮ್ಮ ಹಗರಣ,ವೈಫಲ್ಯಗಳನ್ನು ಮುಚ್ಚಿಕೊಳ್ಳುವುದು.ಅದರಲ್ಲೂ ಇಂತ ವಿಷಯದಲ್ಲಿ ಕಾಂಗ್ರೆಸ್ಸ್ ಪಕ್ಷದ್ದು ಉಳಿದೆಲ್ಲರಿಗಿಂತ ಒಂದು ‘ಕೈ’ ಮೇಲೆಯೇ ಹೌದು.
೨೪ ಗಂಟೆಯ ಮೀಡಿಯಾ ಯುಗದಲ್ಲಿ ದೊಡ್ಡ ದೊಡ್ಡ ಹಗರಣಗಳು ಸುದ್ದಿಯಾದಗಾಲೆಲ್ಲ ಕಾಂಗ್ರೆಸ್ಸ್ ಅದರಿಂದ ಹೊರಬರಲು ಒಂದು ಸಣ್ಣ ಎಳೆಯೇನಾದರೂ ಸಿಗುತ್ತದೆಯಾ ಅಂತ ನೋಡುತ್ತಿರುತ್ತದೆ.ಈ ಬಾರಿ ರೂಪಾಯಿ ಮೌಲ್ಯ ಕುಸಿದು,ಆಡಳಿತ ವ್ಯವಸ್ಥೆಯೇ ಹಳ್ಳ ಹಿಡಿದು ಕುಳಿತಿರುವಾಗ ಅದಕ್ಕೆ ಕಾಣಿಸಿದ ಬೆಳಕಿನ ಹಾದಿ “ನಾಯಿ ಮರಿ”…!
ಹೌದು. ಗುಜರಾತ್ ಮುಖ್ಯಮಂತ್ರಿ ರಾಯಿಟರ್ಸ್ ಸುದ್ದಿ ಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಬಳಸಿದ ನಾಯಿ ಮರಿ ಪದ.ರಾಯಿಟರ್ಸ್ ನೀಡಿದ ಸಂದರ್ಶನದಲ್ಲಿ ನಾಯಿ ಮರಿ ಬಂದಿದ್ದು ಹೇಗೆ ಅಂತ ನೋಡಿದರೆ,
“ಸಂದರ್ಶಕ: “ಏನು (೨೦೦೨ ರ ಗಲಭೆ) ನಡೆಯಿತೋ ಆ ಬಗ್ಗೆ ನೀವು ಪಶ್ಚಾತ್ತಾಪ ಪಡುತ್ತಿರಾ?”
‘ಹಿಂದು’ ಶಬ್ದ ಕೇಳುತ್ತಲೇ ಇವರೇಕೆ ಹುಯಿಲೆಬ್ಬಿಸುತ್ತಾರೆ?
– ಪ್ರವೀಣ್ ಪಟವರ್ಧನ್
ಕೆಲ ದಿನಗಳ ಹಿಂದಷ್ಟೇ ಬೋಧ್ಗಯಾ ಬಾಂಬ್ ಬ್ಲಾಸ್ಟ್ ಪ್ರಕರಣದ ನಂತರ ನೀಡಿದ್ದ ವಿಚಿತ್ರ- ವಿಕೃತ ಹೇಳಿಕೆಗಳನ್ನು ಆಧರಿಸಿ, ತಮಗೆ ಸಮಯ ಬಂದಾಗಲೆಲ್ಲಾ ತಮ್ಮ ತಪ್ಪುಗಳನ್ನು ಮುಚ್ಚಿ ಹಾಕಿ, ಇತರರ (ಉದ್ದೇಶಪೂರ್ವಕವಾಗಿ ಗುಜರಾತಿನ ಮುಖ್ಯಮಂತ್ರಿ ಮೋದಿಯವರ) ತೇಜೋವಧೆ ಮಾಡುವ ಕಾಂಗ್ರೆಸ್ಸಿಗ “ಒಸಾಮಾ ಜೀ” ಎಂದು ಮುಕ್ತ ಮನಸ್ಸಿನಿಂದ ಮರ್ಯಾದೆ ನೀಡಿದ ಖ್ಯಾತಿಯ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ದಿಗ್ವಿಜಯಸಿಂಗ್ ಅವರನ್ನು ಕುರಿತು Facebook ಜಾಲತಾಣದಲ್ಲಿ ಒಂದು ವ್ಯಂಗ್ಯ ಚಿತ್ರ ಹರಿದಾಡುತ್ತಿತ್ತು. ಸಂಕ್ಷಿಪ್ತವಾಗಿ ಹೇಳುವುದಾದರೆ ವ್ಯಂಗ್ಯಚಿತ್ರದಲ್ಲಿ ಇದ್ದುದು ಇಷ್ಟೇ. “ಟೀವಿಯಲ್ಲಿ ದಿಗ್ವಿಜಯಸಿಂಗ್ ಒಂದು ಪತ್ರಿಕಾ ಹೇಳಿಕೆ ನೀಡುತ್ತಿದ್ದಾಗ ಮನೆಯಲ್ಲಿನ ಸಾಕಿದ ನಾಯಿಗಳು ಟೀವಿ ನೋಡುತ್ತಾ ಬೊಗಳುತ್ತಿವೆ. ಮುಂದೇನೂ ಹೇಳಲಾರೆ. ನೀವೇ ಅರ್ಥ ಮಾಡಿಕೊಳ್ಳಬಲ್ಲಿರಷ್ಟೇ.
ರಾಜಕಾರಣಿಯೆಂದರೆ ಅಲ್ಲಿ ವಾದ-ವಿವಾದಗಳು ಸಾಮಾನ್ಯ. ಈಗಿನ ರಾಜಕಾರಣದಲ್ಲಿ ಜನಪರ ಕೆಲಸ ಮಾಡುವುದಕ್ಕಿಂತ ವಾದಗಳಿಗೆ ಸಿಲುಕಿಕೊಳ್ಳುವುದೇ ಹೆಚ್ಚು. ಒಬ್ಬರ ಮೇಲೋಬ್ಬರ ಕೆಸರೆರಚಾಟ. ವಿರೋಧ ಪಕ್ಷದ ವ್ಯಕ್ತಿಯ ತೇಜೋವಧೆ, ಸುಳ್ಳು ಆರೋಪ, ಅರ್ಥವಿಹೀನ ಹೇಳಿಕೆ ಇವೆಲ್ಲವೂ ಕೆಸರೆರೆಚಾಟದ ವಿವಿಧ ಮುಖಗಳು. ನಿಮ್ಮ ಸರ್ಕಾರ ಹೀಗೆ ಮಾಡಿದ್ದು ಸರಿಯೇ ಎಂಬ ಪ್ರಶ್ನೆಗೆ ಸಿಗುವ ಉತ್ತರ, ನಮ್ಮ ಹಿಂದಿನ ಸರ್ಕಾರ ಇದಕ್ಕಿಂತಲೂ ಕೆಟ್ಟ ಕೆಲಸ ಮಾಡಿತ್ತು ಅದರ ಬಗ್ಗೆ ಮಾತಾಡೋಣವೇ ಎಂದು ಕುಟುಕಿ ತಮ್ಮ ಲೋಪಗಳನ್ನು cover-up ಮಾಡಿಕೊಳ್ಳುವವರೇ ಈ ದಿನ ಹೆಚ್ಚು.
ಅವರಿಗೆ ಸಾಚಾರ್ ವರದಿ: ನಮಗೇಕಿಲ್ಲ ಪಚೌರಿ ವರದಿ?
-ಸಂತೋಷ್ ತಮ್ಮಯ್ಯ
ಭಾರತದಲ್ಲಿ ಹಿಂದುಗಳು ಎಂದರೆ ಎರಡನೇ ದರ್ಜೆಯ ಜನರು ಮತ್ತು ಹಿಂದುಗಳನ್ನು ಎಲ್ಲಿಡಬೇಕೋ ಅಲ್ಲೇ ಇಡಲಾಗುತ್ತಿದೆ ಎಂಬುದಕ್ಕೆ ರಾಮಸೇತು ಪ್ರಕರಣವೇ ಸಾಕ್ಷಿ. ಕೇಂದ್ರ ಸರಕಾರ ರಾಜೇಂದ್ರ ಪಚೌರಿ ವರದಿಯನ್ನು ತಿರಸ್ಕರಿಸುವುದರ ಮೂಲಕ ಅದನ್ನು ಸಾಭೀತುಪಡಿಸಿದೆ. ಸುಪ್ರಿಂಕೋರ್ಟಿಗೆ ತಾನು ಸೇತುಸಮುದ್ರಂ ಯೋಜನೆಯನ್ನು ಮಾಡಲು ಬಯಸಿರುವುದಾಗಿಯೂ, ಇಷ್ಟಿಷ್ಟು ಖರ್ಚುವೆಚ್ಚಗಳನ್ನು ಅದಕ್ಕಾಗಿ ಇಟ್ಟಿರುವುದಾಗಿಯೂ ಇದು ರಾಷ್ಟ್ರದ ಮಹತ್ತ್ವಾಕಾಂಕ್ಷೆಯ ಯೋಜನೆಗಳಲ್ಲೊಂದು ಎಂಬುದರ ಬಗ್ಗೆ ಅಫಿಡವಿಟ್ ಅನ್ನು ಸಲ್ಲಿಸಿದೆ.
ಸಲ್ಲಿಸದೇ ಇನ್ನೇನು ತಾನೇ ಮಾಡಿಯಾರು? ರಾಮಸೇತು ಹಿಂದೂ ಭಾವನೆಗಳಿಗೆ ಸಂಬಂಧಪಟ್ಟ ಸಂಗತಿ, ರಾಮಸೇತು ರಾಮಾಯಣಕ್ಕೆ ಸಂಬಂಧಪಟ್ಟ ಸಂಗತಿ, ರಾಮಸೇತು ಹಿಂದೂ ತತ್ತ್ವಶಾಸ್ತ್ರ, ಅಧ್ಯಾತ್ಮದ ಪರಾಕಾಷ್ಠೆಗೆ ಸಂಬಂಧಪಟ್ಟ ಸಂಗತಿ, ರಾಮಸೇತು ವಿಶ್ವದ ಓರ್ವ ಮಹಾನ್ ಆದರ್ಶಪುರುಷನೊಬ್ಬನ , ಧರ್ಮಸಂಸ್ಥಾಪಕನೊಬ್ಬನಿಗೆ ಸಂಬಂಧಪಟ್ಟ ಸಂಗತಿ. ಆ ಆದರ್ಶಪುರುಷ ಹಿಂದೂ ದೇವರು ಎಂಬ ಉದಾಸೀನತನ ಸರಕಾರಕ್ಕೆ ಇರುವಾಗ ಈ ಸರಕಾರ ಅಫಿಡವಿಟ್ ಅನ್ನೂ ಸಲ್ಲಿಸುತ್ತದೆ ಮತ್ತು ಅಯೋಧ್ಯೆಯನ್ನೂ ತುಂಡುಮಾಡಿ ಹಂಚಿಬಿಡುತ್ತದೆ. ಅಂದು ಬಾಬರ್ ಮಾಡಿದಂತೆ ರಾಮಕುರುಹನ್ನೇ ಒಡೆಯುತ್ತದೆ. ಹಾಗಾಗಿ ರಾಜೇಂದ್ರ ಪಚೌರಿ ಎಂಬ ವಿಶ್ವವಿಖ್ಯಾತ ಪರಿಸರ ಶಾಸ್ತ್ರಜ್ನ, ಚಿಂತಕ ಹೇಳುವ ಮಾತನ್ನು ಸರಕಾರ ಕೇಳುವ ಸ್ಥತಿಯಲ್ಲಿರುವುದಿಲ್ಲ. ಅದನ್ನು ತಿರಸ್ಕರಿಸದೇ ಇರುವುದಿಲ್ಲ.
ಕೆಲವರ್ಷಗಳ ಹಿಂದೆ ರಾಜೇಂದ್ರ ಪಚೌರಿ ವರದಿ ಸರಕಾರದ ಸೇತುಸಮುದ್ರಂ ಯೋಜನೆಯ ಅವೈಜ್ನಾನಿಕತೆ ಮತ್ತು ತಿಕ್ಕಲುತನಗಳನ್ನು ಎಳೆಎಳೆಯಾಗಿ ಬಿಡಿಸಿ ವರದಿಯನ್ನು ಸಿದ್ಧ ಮಾಡಿತ್ತು. ಭೂಗೋಳದ ದಕ್ಷಿಣದ ಸಮುದ್ರಗಳ ಜಲಚರಗಳ ತವರು ಮನೆ ಈ ಪ್ರದೇಶ ಎಂದು ಬಣ್ಣಿಸಿತ್ತು. ಈ ಪ್ರದೇಶದಲ್ಲಿ ನಡೆಯುವ ಯಾವುದೇ ಮಾನವ ಹಸ್ತಕ್ಷೇಪಗಳು ಈ ಜಲಚರಗಳ ಸಂತತಿಯನ್ನು ಕೊಲ್ಲುತ್ತದೆ ಎಂದು ಹೇಳಿತ್ತು. ಮತ್ತು ಭಾರತ ಮತ್ತು ಶ್ರೀಲಂಕಾ ನಡುವಿನ ಕಡಲ್ಗಾಲುವೆಗೆ ಪರ್ಯಾಯ ಮಾರ್ಗವನ್ನು ಸೂಚಿಸಿತ್ತು. ಆದರೆ ಸರಕಾರ, ಯಾವ ರಾಜೇಂದ್ರ ಪಚೌರಿಯವರ ಮಾತಿಗಾಗಿ ವಿಶ್ವಸಂಸ್ಥೆ ಕಾಯುತ್ತದೆಯೋ, ಯಾವ ರಾಜೇಂದ್ರ ಪಚೌರಿಯವರ ಒಂದು ಸಲಹೆಗಾಗಿ ಯುನೆಸ್ಕೋ ಬೇಡಿಕೊಳ್ಳುತ್ತದೆಯೋ, ಯಾವ ರಾಜೇಂದ್ರ ಪಚೌರಿಯವರ ಡೇಟ್‌ಗಾಗಿ ವಿದೇಶದ ವಿಶ್ವವಿದ್ಯಾಲಯಗಳು ಕಾಯುತ್ತವೆಯೋ, ಯಾವ ನೊಬೆಲ್ ಪ್ರಶಸ್ತಿ ಸಮಿತಿ ಯಾವ ರಾಜೇಂದ್ರ ಪಚೌರಿಯವರನ್ನು ಆಹ್ವಾನಿಸುತ್ತದೆಯೋ ಅಂಥ ಪಚೌರಿಯವರನ್ನು, ಅವರ ವರದಿಯನ್ನು ಸಾರಾಸಗಟಾಗಿ ತಿರಸ್ಕರಿಸುತ್ತದೆ. ಕಾರಣ ರಾಮ ಹಿಂದು. ರಾಮಸೇತು ಹಿಂದೂ ಭಾವನೆ.ಅದು ದೇಶದಲ್ಲಿ ಅಂಥಾ ದೊಡ್ಡ ಸಂಗತಿಯೇನಲ್ಲ ಎಂಬ ತನ್ನ ಎಂದಿನ ಕಾಂಗ್ರೆಸ್ ನೀತಿ. ಹಾಗಾಗಿ ಕಾಂಗ್ರೆಸ್‌ಗೆ ಯಾವಾಗಲೂ ಮುಸಲ್ಮಾನರಿಗೆ ಹೆಚ್ಚು ತಿನ್ನಿಸಿ, ಅವರಿಗೆ ಹೆಚ್ಚು ಕುಡಿಸಿ, ಹೆಚ್ಚು ಸಂಬಳ ಕೊಡಿಸಿ, ಹೆಚ್ಚುಹೆಚ್ಚಾಗಿ ಮಿಲಿಟರಿಗೆ ಸೇರಿಸಿಕೊಳ್ಳಿ, ಮೇಷ್ಟ್ರನ್ನಾಗಿ ನೇಮಿಸಿಕೊಳ್ಳಿ,ಗುಮಾಸ್ತರನ್ನಾಗಿಸಿಕೊಳ್ಳಿ. ಅವರನ್ನು ಜತನದಿಂದ ನೋಡಿಕೊಂಡಿರಿ. ಪಾಪ ಅವರು ಬಡವರು ನೋಡಿ, ಮೀಸಲಾತಿ ಸಿಗದೇ ಇದ್ದರೆ ಅವರು ಸತ್ತೇಹೋದಾರು ಎಂದೆಲ್ಲಾ ಆಲಾಪಿಸುವ ರಾಜೇಂದ್ರ ಸಾಚಾರ್ ವರದಿ ಮಾತ್ರ ಇಷ್ಟವಾಗುತ್ತದೆ. ರಾಜೇಂದ್ರ ಪಚೌರಿ ವರದಿ ಮೂಲೆಗುಂಪಾಗುತ್ತದೆ.
ಪ್ರತ್ಯೇಕ ಪಂಕ್ತಿ ಭೋಜನ ನಿಂತರೆ ಮಡೆ ಸ್ನಾನವೂ ನಿಂತೀತು
– ರಾಕೇಶ್ ಶೆಟ್ಟಿ
ಉಡುಪಿಯ ಕೃಷ್ಣ ತಿರುಗಿ ನಿಂತಷ್ಟು ಸುಲಭವಲ್ಲ ’ಮಡೆ ಸ್ನಾನ’ ನಿಲ್ಲುವುದು…! ಅಂತ ವರ್ಷದ ಹಿಂದೆ ಮಡೆಸ್ನಾನ ಅನ್ನುವ ವಿಕೃತಿಯನ್ನು ವಿರೋಧಿಸಿ ಬರೆದಿದ್ದು ನಿಜವಾಗಿದೆ.ನಿನ್ನೆ ಮತ್ತೆ ಕುಕ್ಕೆಯಲ್ಲಿ ಮಡೆಸ್ನಾನ ಸಾಂಗೋಪಾಂಗವಾಗಿ ನೆರವೇರಿದೆ.ತಾವು ತಿಂದು ಬಿಡುವ ಎಂಜಲ ಮೇಲೆ ಮನುಷ್ಯರು ಹೊರಳಾಡುತ್ತಾರೆ ಅಂತ ಗೊತ್ತಿದ್ದು ಉಣ್ಣುವ ರೋಗಗ್ರಸ್ತ ಅಹಂ ಮನಸ್ಸುಗಳು ಮತ್ತು ಇನ್ನೊಬ್ಬರ ಎಂಜಲೆಲೆಯೇ ಪರಮ ಪವಿತ್ರ ಅನ್ನುವ ಮೂಢರು ಎಂಜಲೆಲೆಯ ಸ್ನಾನದಲ್ಲಿ ಮಿಂದು ಪುನೀತರಾಗಿದ್ದಾರೆ.
ಇನ್ನೊಂದೆಡೆ “ನಾವೆಲ್ಲ ಹಿಂದೂ,ನಾವೆಲ್ಲ ಒಂದು” ಅನ್ನುವವರೆಲ್ಲ ಸದ್ದಿಲ್ಲದೆ ಹಿಂದೆಯೇ ನಿಂತು ಎಂಜಲೆಲೆಯ ಮೇಲೆ ದೇವರ ಹೆಸರಿನ ನಂಬಿಕೆ(ಹೆದರಿಕೆ?)ಯಲ್ಲಿ ಜಾಗೃತರಲ್ಲದವರನ್ನು ಉರುಳಾಡಿಸಿ ಕೃತಾರ್ತರಾಗಿದ್ದಾರೆ.ಅಲ್ಲಿಗೆ “ನಾವೆಲ್ಲ ಹಿಂದೂ – ನಾವಿನ್ನೂ ಹಿಂದು” ಎನ್ನಲಡ್ಡಿಯಿಲ್ಲ ಅಲ್ಲವೇ?
ಮುಸ್ಲಿಮರ ವಿರುದ್ಧ ಕೆಂಡಕಾರುವುದಕ್ಕಷ್ಟೇ ಹಿಂದೂ ಜಾಗೃತಿ ಸೀಮಿತವಾಗಬೇಕಾ?
– ಡಾ. ಅಶೋಕ್ ಕೆ.ಆರ್
ಅನಾಗರೀಕ, ಹಿಂದುಳಿದ ರಾಜ್ಯಗಳೆಂಬ ಹಣೆಪಟ್ಟಿ ಹೊತ್ತ ದೂರದ ಬಿಹಾರ, ಉತ್ತರಪ್ರದೇಶದಲ್ಲಿ ನಡೆಯುತ್ತದೆಂದು ಕೇಳುತ್ತಿದ್ದ ಅಮಾನವೀಯ ಘಟನೆಯೊಂದು ನಮ್ಮ ಕರ್ನಾಟಕದ ಮಂಡ್ಯಜಿಲ್ಲೆಯಲ್ಲಿ ನಡೆದುಹೋಗಿದೆ. ನಾಲ್ವರು ಯುವಕರು ಯಶವಂತಪುರ – ಮೈಸೂರು ರೈಲಿನಲ್ಲಿ ಮಹಿಳೆಯೊಬ್ಬಳನ್ನು ಚುಡಾಯಿಸಿದ್ದಾರೆ. ಬೇಸತ್ತ ಯುವತಿ ಬಾಗಿಲಿನ ಬಳಿ ಬಂದು ನಿಂತಿದ್ದಾಳೆ. ಅಲ್ಲಿಗೂ ಬಂದು ರೇಗಿಸಲಾರಂಭಿಸಿದವರಿಗೆ ಪೋಲೀಸರಿಗೆ ದೂರು ನೀಡುವುದಾಗಿ ಹೇಳಿದ್ದಾಳೆ. ಕೋಪಗೊಂಡ ಆ ನಾಲ್ಕು ಮನುಷ್ಯರೂಪಿ ರಾಕ್ಷಸರು ಚಲಿಸುವ ರೈಲಿನಿಂದ ಆಕೆಯನ್ನು ಹೊರತಳ್ಳಿಬಿಟ್ಟಿದ್ದಾರೆ. ರೈಲಾಗ ಮದ್ದೂರಿನ ಶಿಂಷಾ ನದಿಯ ಸೇತುವೆಯ ಮೇಲೆ ಚಲಿಸುತ್ತಿತ್ತು. ಅದೃಷ್ಟವಶಾತ್ ಬದುಕುಳಿದಿದ್ದಾಳೆ. ಬೆನ್ನುಹುರಿಗೆ ಬಿದ್ದ ಏಟು, ಮೂಳೆಮುರಿತದಿಂದ ಎಷ್ಟರ ಮಟ್ಟಿಗೆ ಆ ಯುವತಿ ಚೇತರಿಸಿಕೊಳ್ಳುತ್ತಾಳೆ ಎಂಬುದನ್ನು ಕಾದುನೋಡಬೇಕಷ್ಟೇ.
ಆ ನಾಲ್ಕೂ ಯುವಕರನ್ನು ಪೋಲೀಸರು ಬಂಧಿಸಿದ್ದಾರೆ. ಮಾರನೇ ದಿನ ನ್ಯಾಯಾಲಯಕ್ಕೆ ಅವರನ್ನು ಕರೆದೊಯ್ಯುವಾಗ ಹಿಂದೂ ಜಾಗರಣ ವೇದಿಕೆಯ ಸದಸ್ಯರು ಮುತ್ತಿಗೆ ಹಾಕಿ ಅಪರಾಧಿಗಳನ್ನು ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಊರಿನ ಹೆಣ್ಣುಮಗಳ ಜೀವಕ್ಕೆ ಅಪಾಯತಂದ ಯುವಕರ ಮೇಲಿನ ಕೋಪ ಸಹಜವಾದುದು. ಆದರೆ? ಹಿಂದೂ ಜಾಗರಣ ವೇದಿಕೆ ಜಾಗೃತಗೊಂಡು ಆ ನಾಲ್ವರನ್ನು ಥಳಿಸಿದ್ದು ಯುವತಿಯ ಮೇಲೆ ಹಲ್ಲೆಯಾದ ಕಾರಣಕ್ಕೆ ಮಾತ್ರವಲ್ಲ! ಹಲ್ಲೆ ಮಾಡಿದ ನಾಲ್ವರು ಮುಸ್ಲಿಮರೆಂಬುದೇ ಇವರು ಜಾಗೃತಿಯಾಗಲು ಕಾರಣ! ಹಲ್ಲೆ ಮಾಡಿದವರು ಮುಸ್ಲಿಮರಾಗದೇ ಹಿಂದೂಗಳಾಗಿದ್ದಲ್ಲಿ ಅದರಲ್ಲೂ ಯಾವುದೋ ‘ಮೇಲುಜಾತಿಗೆ’[?] ಸೇರಿದವರಾಗಿದ್ದಲ್ಲಿ ಖಂಡಿತವಾಗ್ಯೂ ಹಿಂದೂ ಜಾಗರಣ ವೇದಿಕೆ ಜಾಗೃತವಾಗುತ್ತಿರಲಿಲ್ಲ ಎಂಬುದೇ ಇಂಥ ಸಂಘಟನೆಗಳ – ಹಿಂದೂ ಧರ್ಮದ ವೈಫಲ್ಯ.
ಕೇಸರೀಕರಣ: ದಾಯಾದಿಗಳ ಕಲಹ
– ಸಂತೋಷ್ ಕುಮಾರ್ ಪಿಕೆ
ಕರ್ನಾಟಕದ ಪ್ರಾಥಮಿಕ ಶಾಲಾಪಠ್ಯದಲ್ಲಿ ಹೊಸ ಪಠ್ಯಕ್ರಮವನ್ನು ಸೇರ್ಪಡೆ ಮಾಡುತ್ತಿರುವ ಕುರಿತು ಎರಡು ಬಣಗಳ ನಡುವೆ ವ್ಯಾಪಕವಾದ ಚರ್ಚೆಯಾಗುತ್ತಿರುವುದು ಒಳ್ಳೆಯ ಸಂಗತಿ. ಬಿ.ಜೆ.ಪಿಯವರು ಹೊಸಪಠ್ಯಕ್ರಮವನ್ನು ಕೇಸರೀಕರಣವೆಂದೂ ಆದರೆ ಅದು ವಿರೋಧಿ ಬಣಗಳು ತಿಳಿದುಕೊಂಡಿರುವ ರೀತಿಯದ್ದಲ್ಲ ಎಂತಲೂ ಹಾಗೂ ಅದರ ವಿರೋಧಿ ಗುಂಪು ಅದು ಕೇಸರೀಕರಣ ಪ್ರಕ್ರಿಯೆ ಎಂತಲೂ ನಿರಪಯುಕ್ತವಾದ ಚರ್ಚೆಯನ್ನು ಬಿರುಸಾಗಿ ನಡೆಸುತ್ತಿದ್ದಾರೆ. ಪ್ರಸ್ತುತ ಬರಹದಲ್ಲಿ ಆ ಚರ್ಚೆಯಲ್ಲಿ ಪಾಲ್ಗೊಂಡವರು ಬೇರೆ ಬೇರೆ ತುದಿಯಲ್ಲಿ ನಿಂತಂತೆ ಭಾಸವಾದರೂ ಇಬ್ಬರೂ ಒಂದೇ ಸೇತುವೆಯ ಮೇಲೆ ನಿಂತಿರುವುದನ್ನು ನಿದರ್ಶಿಸುವ ಪ್ರಯತ್ನವನ್ನು ಮಾಡಲಾಗುವುದು. ಮೊದಲನೆಯದಾಗಿ ಬಿ.ಜೆ.ಪಿ.ಬಣದ ವಾದದಿಂದ ಪ್ರಾರಂಭಿಸುತ್ತೇನೆ.
ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ವಿಶ್ವೇಶ್ವರ ಹೆಡಗೆ ಕಾಗೇರಿಯವರು ಇತ್ತೀಚೆಗೆ ತಮ್ಮ ಲೇಖನದಲ್ಲಿ ಕೇಸರೀಕರಣದ ಕುರಿತು ಎಲ್ಲರಿಗೂ ಗೊಂದಲವಿದ್ದು, ಅದರ ಕುರಿತು ಸ್ಪಷ್ಟತೆ ಅದನ್ನು ವಿರೋಧಿಸುವ ವಿರೋಧಿಗಳಿಗಿಲ್ಲ ಎಂಬ ಮಾತನ್ನು ಹೇಳಿದ್ದಾರೆ. ನನ್ನ ಪ್ರಕಾರ, ಕೇಸರೀಕರಣದ ಕುರಿತು ಅದರ ವಿರೋಧಿಗಳಿಗಿರಲಿ, ಅದರ ಸ್ವಯಂ ಪ್ರತಿಪಾದಕರಿಗೇ ಸರಿಯಾದ ಜ್ಞಾನ ಇರುವುದು ಅನುಮಾನ. ಏಕೆಂದರೆ ಇದುವೇ ಕೇಸರೀಕರಣ ಎಂದು ಸ್ಪಷ್ಟವಾಗಿ ಹೇಳುವ ಧೈರ್ಯ ಯಾರಿಗೂ ಇದ್ದಂತಿಲ್ಲ, ಕೇವಲ ಭಗವಾಧ್ವಜ ಹಿಡಿದುಕೊಂಡು ಮಾಡುವ ಕೆಲಸಗಳು ಮಾತ್ರ ಕೇಸರೀಕರಣವಾಗುತ್ತದೆಯೇ? ಖಂಡಿತ ಇಲ್ಲ, ಏಕೆಂದರೆ ಕೇಸರೀಕರಣ ಎಂಬುದು ಒಂದು ಐಡಿಯಾಲಜಿ, ನಿದರ್ಶಿ ಷ್ಟವಾಗಿ ಇಂತಿಂತಹ ಕೆಲಸಗಳನ್ನು ಮಾಡಬೇಕು ಎಂದು ನಿರ್ದೇಶನ ನೀಡುವ ವಿಚಾರಗಳ ಗುಚ್ಚ ಅದಾಗಿದೆ. ಹಾಗೂ ಕೇಸರೀಕರಣದ ಕುರಿತು ಯಾವುದೇ ಸಿದ್ಧಾಂತ (ಥಿಯರಿ)ದ ಜ್ಞಾನಶಿಸ್ತು (ಜ್ಞಾನಶಿಸ್ತಿನ ಅಗತ್ಯ ಇಲ್ಲ ಎಂದು ಬಿ.ಜೆಪಿ ಯವರು ಭಾವಿಸಿದ್ದರೂ ಕೂಡ) ಇಲ್ಲದಿರುವುದರಿಂದ ಜನರು ತಮ್ಮ ಮನಸೋಇಚ್ಚೆ ಅರ್ಥಮಾಡಿಕೊಳ್ಳಲು ಸಾಧ್ಯವಿದೆ.
ಶ್ರಾದ್ಧ … ಆಚರಣೆ
-ಪ್ರಕಾಶ್ ನರಸಿಂಹಯ್ಯ
ಹುಟ್ಟು ಅಂದಮೇಲೆ ಸಾವು ನಿಶ್ಚಿತ. ಹುಟ್ಟಿನೊಂದಿಗೆ ಪ್ರಾರಂಭವಾಗುವ ಜೀವನ ಯಾತ್ರೆ ಮರಣದೊಂದಿಗೆ ಮುಗಿಯುತ್ತವೆ. ಅಂತ್ಯಸಂಸ್ಕಾರ ನಡೆಯುತ್ತವೆ . ನಂತರದಲ್ಲಿ ಮೃತ ವ್ಯಕ್ತಿಗೆ ಹಲವಾರು ಸಂಸ್ಕಾರಗಳು ನಡೆಯುತ್ತವೆ. ಸತ್ತ ದಿನದಿಂದ ಹದಿನಾಲ್ಕು ದಿನಗಳವರೆಗೆ ಹಲವಾರು ರೀತಿಯ ಕರ್ಮಗಳನ್ನು ಅವರವರ ಪದ್ದತಿಗನುಸಾರವಾಗಿ ಮತ್ತು ಸಂಪ್ರದಾಯದಂತೆ ಮಾಡುತ್ತಾರೆ. ಮೃತ ವ್ಯಕ್ತಿಯ ಮಕ್ಕಳು ಸಾಮಾನ್ಯವಾಗಿ ಈ ಕರ್ಮವನ್ನು ಮಾಡುತ್ತಾರೆ.ನಂತರದಲ್ಲಿ ಪ್ರತಿ ವರ್ಷ ಮೃತರ ನೆನಪಿನಲ್ಲಿ ಶ್ರಾದ್ಧ ಕರ್ಮಅಥವಾ ತಿಥಿ ಎಂಬ ಹೆಸರಿನಲ್ಲಿ ಆಚರಣೆ ಮಾಡುವುದು ರೂಡಿಯಲ್ಲಿದೆ.
ಸಂಸ್ಕೃತಿ ಸಂಕಥನ – 18 – ಇಸ್ಲಾಮಿಕ್ ಹಾಗೂ ಯುರೋಪಿಯನ್ ವಸಾಹತುಶಾಹಿ
-ರಮಾನಂದ ಐನಕೈ
ಇತ್ತೀಚೆಗೆ ಮಂಚೀಕೇರಿಯಲ್ಲಿ ಬಾಲಗಂಗಾಧರರ ಸಂವಾದ ಕಾರ್ಯಕ್ರಮ ಏರ್ಪಡಿಸ ಲಾಗಿತ್ತು. ಮುಂಚೀಕೇರಿಯ ಸಂಹತಿ ಟ್ರಸ್ಟ್ ಹಾಗೂ ಶಿವಮೊಗ್ಗ ಸ್ಥಳೀಯ ಸಂಸ್ಕೃತಿಗಳ ಅಧ್ಯಯನ ಕೇಂದ್ರದ ಜಂಟಿ ಆಶ್ರಯದಲ್ಲಿ ನಡೆದ ಈ ಕಾರ್ಯಕ್ರಮವನ್ನು ಸಂಹತಿ ಗೆಳೆಯರು ತುಂಬಾ ಅಚ್ಚುಕಟ್ಟಾಗಿ ಸಂಘಟಿಸಿದ್ದರು. ನೂರಕ್ಕೂ ಹೆಚ್ಚು ಜನ ಸಂವಾದದಲ್ಲಿ ಪಾಲ್ಗೊಂಡು ಪ್ರಶ್ನೆಗಳ ಸುರಿಮಳೆ ಗೈದರು. ಬೇರೆ ಬೇರೆ ಪ್ರಶ್ನೆಗಳಿಗೆ ಬಾಲ ಗಂಗಾಧರರು ನೀಡಿದ ಉತ್ತರಗಳನ್ನು ಒಂದು ಚೌಕಟ್ಟಿನಲ್ಲಿ ಹಿಡಿದಿಡುವ ಪ್ರಯತ್ನ ಇಲ್ಲಿದೆ.
ಭಾರತ ತನ್ನ ಇತಿಹಾಸದಲ್ಲಿ ಎರಡು ವಸಹಾತು ಶಾಹಿಗಳನ್ನು ಕಂಡಿದೆ. ಇಸ್ಲಾಮಿಕ್ ಹಾಗೂ ಯುರೋಪಿಯನ್ ವಸಾಹತುಶಾಹಿ. ಇವೆರಡೂ ಕೂಡಾ ಸೆಮೆಟಿಕ್ ರಿಲಿಜನ್ ಹೊಂದಿದ ಸಂಸ್ಕೃತಿ ಯಿಂದ ಬಂದಂತಹವುಗಳು. ಇವರು ಪ್ರಪಂಚದ ಎಲ್ಲ ಸಂಸ್ಕೃತಿಗಳಲ್ಲಿ ರಿಲಿಜನ್ ಇದೆ ಎಂದು ನಂಬಿ ದವರು, ಭಾರತಕ್ಕೆ ಬಂದಾಗ ಇಲ್ಲಿನ ಸಂಸ್ಕೃತಿ ಯಲ್ಲೂ ರಿಲಿಜನ್ ಹುಡುಕಲು ಪ್ರಾರಂಭಿಸಿದರು. ಅದು ಅವರಿಗೆ ಸುಲಭಕ್ಕೆ ಸಾಧ್ಯವಾಗಲಿಲ್ಲ. ಸೆಮೆಟಿಕ್ ರಿಲಿಜನ್ಗಳ ಕನ್ನಡಕ ಹಾಕಿಕೊಂಡು ಹುಡುಕಿದರು. ಕೊನೆಗೂ ‘ಹಿಂದೂಯಿಸಂ’ ಎಂಬ ರಿಲಿಜನ್ನನ್ನು ಕಂಡುಹಿಡಿದೇಬಿಟ್ಟರು. ಹಿಂದೂ ರಿಲಿಜನ್ ಅಂದರೆ ಪಾಶ್ಚಾತ್ಯರಿಗೆ ಮಾತ್ರ ಅರ್ಥ ವಾಗುತ್ತದೆ. ಭಾರತೀಯರಿಗೆ ಅರ್ಥವಾಗುವು ದಿಲ್ಲ. ಏಕೆಂದರೆ ಭಾರತದ ಹೆಚ್ಚಿನ ಜನರಿಗೆ ಹಿಂದೂ ರಿಲಿಜನ್ನಿನ ಅನುಭವವೇ ಆಗುವುದಿಲ್ಲ. ರಿಲಿಜ ನ್ನಿನ ಯಾವುದೇ ಸರಳ ರೇಖೆಗಳು ನಮ್ಮಲ್ಲಿಲ್ಲ. ದಿನನಿತ್ಯ ನಮ್ಮ ನಡುವೆ ಕಾಣುವ ಗೊಂದಲಗಳು ರಿಲಿಜನ್ ಹಾಗೂ ಸಂಸ್ಕೃತಿಯ ನಡುವಿನ ಹೊಂದಾಣಿಕೆ ಆಗದ ತಿಕ್ಕಾಟಗಳು, ಆದರೆ ಇದು ವರೆಗೆ ಯಾವ ಭಾರತೀ ಯನೂ ಈ ಕುರಿತು ಸಂಶೋಧನೆ ನಡೆಸದೇ ಇದ್ದದ್ದು ಆಶ್ಚರ್ಯದ ವಿಷಯ. ಪಾಶ್ಚಿಮಾತ್ಯರು ಭಾರತದ ಕುರಿತಾದ ತಮ್ಮ ಅನುಭವಗಳನ್ನು ಹೇಳಿ ಕೊಳ್ಳುತ್ತ ಬಂದರು. ಅವರ ಅನುಭವಗಳನ್ನೇ ಭಾರತೀಯರು ತಮ್ಮ ನಿಜ ಎಂದು ನಂಬಿಕೊಳ್ಳುತ್ತ ಬಂದರು. ಅವರ ಅನುಭವಗಳನ್ನೇ ಈಗ ನಮ್ಮ ಅನುಭವಗಳೆಂಬಂತೆ ಪುನರಾವರ್ತಿಸುತ್ತಿದ್ದೇವೆ. ಇದನ್ನೇ ವಸಾಹತು ಪ್ರಜ್ಞೆ ಅನ್ನುವುದು. ಬಾಲ ಗಂಗಾಧರರು ಈ ಕುರಿತು ಸಂಶೋ ಧನೆ ನಡೆಸುತ್ತಿರುವ ದೇಶದ ಹಾಗೂ ಪ್ರಪಂಚದ ಪ್ರಪ್ರಥಮ ಚಿಂತಕರು.




