ಆಫ್ರಿಕಾದ ಕಾಡಿನಲ್ಲೊಂದು ಸರ್ಜಿಕಲ್ ಸ್ಟ್ರೈಕ್ ಭಾಗ 2
– ತಾರನಾಥ ಸೋನ
ಆಫ್ರಿಕಾದ ಕಾಡಿನಲ್ಲೊಂದು ಸರ್ಜಿಕಲ್ ಸ್ಟ್ರೈಕ್ ಭಾಗ-1
ಸಾಸ್ ಅರಣ್ಯದಲ್ಲಿ ಇಷ್ಟೆಲ್ಲ ಆಗುತ್ತಿರುವಾಗ ಇತ್ತ ಕಡೆ ಬ್ರಿಟಿಷ್ ಸೇನೆಯಲ್ಲಿ ಸದ್ದಿಲ್ಲದಂತೆ ರೂಪುರೇಷೆಯೊಂದು ತಯಾರಾಗಿತ್ತು. ಅಪಹೃತರನ್ನು ರಕ್ಷಿಸಲು ಬ್ರಿಟಿಷ್ ಪ್ರಧಾನಿ ಟೋನಿ ಬ್ಲೇರ್ ರಹಸ್ಯ ಕಾರ್ಯಾಚರಣೆ ಒಂದಕ್ಕೆ ಅನುಮತಿ ಕೊಟ್ಟರು. ಅದುವೇ ಆಪರೇಷನ್ ಬರ್ರಾಸ್. ಇಂತಹ ಸರ್ಜಿಕಲ್ ಸ್ಟ್ರೈಕ್ ಕಾರ್ಯಾಚರಣೆಗೆಂದು ಸಿದ್ದವಾಗಿದ್ದ ಸಾಸ್ (SAS- Special Air service) ತನ್ನ ಪರಿವೀಕ್ಷಣಾ ತಂಡವೊಂದನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ವೆಸ್ಟ್ ಸೈಡ್ ಬಾಯ್ಸ್ಗಳ ತಾಣದತ್ತ ಕಳುಹಿಸಿತು. ಅಪಹೃತರನ್ನು ಕೂಡಿ ಹಾಕಿದ್ದ ಪ್ರದೇಶದ ಸ್ವಲ್ಪ ದೂರದಲ್ಲಿ ಅಡಗಿಕೊಂಡ ಇವರು ಸೂಕ್ಷ್ಮ ಮೈಕ್ರೋಫೋನ್ ಮೂಲಕ ಅಲ್ಲಿಂದ ಕೇಳಿ ಬರುವ ಮಾತುಕತೆಗಳನ್ನು ಆಲಿಸಲಾರಂಭಿಸಿದರು. ಬೇಡಿಕೆಗಳ ಈಡೇರಿಕೆ ತಡವಾದಂತೆ ಉಗ್ರರು ಯೋಧರನ್ನು ಹಿಂಸಿಸಲಾರಂಭಿಸಿದರು. ಗುಂಡಿಯೊಳಗೆ ಜೀವಂತ ಶವವಾಗಿದ್ದ ಮುಸ ಬಂಗುರಾನ ಪರಿಸ್ಥಿತಿ ದಿನಕಳೆದಂತೆ ಬಿಗಡಾಯಿಸುತಿತ್ತು. ಗ್ಯಾಂಗ್ ಜತೆಗಿದ್ದ ಸಣ್ಣ ಸಣ್ಣ ಬಾಲಕರು ಕೂಡ ಅವನಿಗೆ ಕಲ್ಲು ಹೊಡೆಯುತ್ತಿದ್ದರು. ಮೇಜರ್ ಅಲನ್ ಮಾರ್ಷಲ್ರನ್ನು ಅಂತಾರಾಷ್ಟ್ರೀಯ ಮಾಧ್ಯಮದ ಜೊತೆಗೆ ಫೋನ್ನಲ್ಲಿ ಮಾತಾಡುವಂತೆ ಒತ್ತಾಯಿಸಲಾಗುತ್ತಿತ್ತು, ಒಪ್ಪದಿದ್ದಾಗ ಕೊಲ್ಲುವುದಾಗಿ ಹೆದರಿಸುತಿದ್ದರು. ಇದನ್ನು ಪರಿವೀಕ್ಷಣಾ ತಂಡ ಮುಖ್ಯನೆಲೆಗೆ ವರದಿ ಮಾಡುತ್ತಿತ್ತು.
ಸಿಯಾರ್ ಲಿಯೋನ್ನ ಮುಖ್ಯ ನದಿಯಾದ ರೊಕೆಲ್ ಕ್ರೀಕ್ ನ ಉತ್ತರ ಭಾಗದಲ್ಲಿ ಒತ್ತೆಯಾಳುಗಳನ್ನು ಕೂಡಿ ಹಾಕಿದ ಗಬೇರಿ ಬಾನ ಇದ್ದರೆ, ನದಿಯ ದಕ್ಷಿಣ ಭಾಗದ ಮ್ಯಾಗ್ಬೇನಿಯಲ್ಲಿ ಅವರದ್ದೆ ಇನ್ನೊಂದು ತಾಣವಿತ್ತು. ಸಾಸ್ ತಂಡ ಕೇವಲ ಗಬೇರಿ ಬಾನಕ್ಕೆ ಧಾಳಿ ನಡೆಸಿದರೆ ಅಲ್ಲಿಂದ ಸುಮಾರು 2 km ದೂರದ ಮ್ಯಾಗ್ಬೇನಿಯಲ್ಲಿದ್ದ ಉಗ್ರರ ಪ್ರತಿರೋಧ ಎದುರಿಸಬೇಕಿತ್ತು. ಹಾಗಾಗಿ ಏಕಕಾಲದಲ್ಲಿ ನದಿಯ ಎರಡು ಬದಿ ಧಾಳಿ ಮಾಡಬೇಕಿತ್ತು. ಈ ಸಂಯುಕ್ತ ಧಾಳಿಗೆ ಬ್ರಿಟಿಷ್ ಪ್ಯಾರಾಚೂಟ್ ರೆಜಿಮೆಂಟ್ನ 130 ಯೋಧರನ್ನು ಬಳಸಿಕೊಳ್ಳಲು ನಿರ್ಧರಿಸಿದರು. ದಟ್ಟವಾದ ಅರಣ್ಯ, ಅಪಾಯಕಾರಿ ರಸ್ತೆಮಾರ್ಗ ಮತ್ತು ಹರಿಯುವ ನದಿಯಿಂದಾಗಿ ವಾಯುಮಾರ್ಗದಲ್ಲಿ ಧಾಳಿ ಮಾಡಲು ಯೋಜಿಸಲಾಯಿತು. ಶತ್ರುಗಳು ಹೊಂದಿರುವ ಆಯುಧಗಳು, ಚಲನವಲನ ಹಾಗು ಹೆಲಿಕ್ಯಾಪ್ಟರ್ ಇಳಿಯಲು ಸೂಕ್ತ ಜಾಗ ಮೊದಲಾದ ಮಾಹಿತಿಯನ್ನು ಸಾಸ್ ನ ಪರಿವೀಕ್ಷಣಾ ತಂಡ ಒದಗಿಸಿತು. ಒಂದು ರಹಸ್ಯ ತಾಣದಲ್ಲಿ ಕಾರ್ಯಾಚರಣೆಯ ರಿಹರ್ಸಲ್ ಕೂಡ ನಡೆಸಿದ್ದರು, ಏಕೆಂದರೆ 12 ಮಂದಿ ಸೇನೆಯ ಒತ್ತೆಯಾಳುಗಳು ಹಾಗು ಹೀಗೆಯೇ ಬಂಧಿತರಾಗಿದ್ದ ಕೆಲವು ಸಿಯರ್ ಲಿಯೋನ್ ನಾಗರಿಕರ ಪ್ರಾಣಕ್ಕೆ ಕುತ್ತು ಉಂಟಾಗಬಾರದಿತ್ತು.
Share this:
- Share on X (Opens in new window) X
- Share on Facebook (Opens in new window) Facebook
- Email a link to a friend (Opens in new window) Email
- ಮುದ್ರಿಸಿ (Opens in new window) Print
- Share on LinkedIn (Opens in new window) LinkedIn
- Share on google mail (Opens in new window) google mail
- Share on Tumblr (Opens in new window) Tumblr
- Share on Reddit (Opens in new window) Reddit
- Share on Pinterest (Opens in new window) Pinterest
- Share on buzz.google.com (Opens in new window) buzz.google.com





